ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನವರಾತ್ರಿ ಸಂಭ್ರಮ

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನವರಾತ್ರಿ ಪ್ರಯುಕ್ತ ಶಾರದಾ ಪೂಜೆಯನ್ನು ಸಂಭ್ರಮದಿಂದ ಅಕ್ಟೋಬರ್ ೫ ರಂದು ಆಚರಿಸಲಾಯಿತು. ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ಶ್ರೀ ಹರಿನಾರಾಯಣದಾಸ ಅಸ್ರಣ್ಣರು ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳು ಕುಣಿತ ಭಜನೆ, ನೃತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತ ಪಡಿಸಿದರು. ಇದೆ ಸಂದರ್ಭದಲ್ಲಿ ಕಲ್ಲಬೆಟ್ಟು ಶ್ರೀ ಮಹಮ್ಮಾಯೀ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ಭಜನಾ ಸೇವೆ ನಡೆಸಿದರು. ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್, ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ , ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು