ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭಾಗಿ. ವಿದ್ಯಾರ್ಥಿಯ ಭವಿಷ್ಯದ ಕಾಳಜಿಯಿಂದ ಸುಪ್ತವಾಗಿರುವ ಶಕ್ತಿಯನ್ನು ಬೆಳಕಿಗೆ ತರುವುದು ಶಿಕ್ಷಕನ ಧರ್ಮ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ ನಿಶ್ಚಿತ ಗುರಿಯೆಡೆಗೆ ಸಾಗುವಲ್ಲಿ ಗುರುವಿನ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ ಶಿಕ್ಷಕ ಮಹನೀಯರಾದ ಪ್ರೊ. ವಿಶ್ವನಾಥ ಪಿ, ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರು, ಎಸ್ ಡಿ ಎಮ್ ಕಾಲೇಜ್ ಪ್ರೊ ಬಿ ನಾಗೇಶ್ ನಾಯಕ್ , ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥರು ಎಸ್ ಡಿ ಎಮ್ ಕಾಲೇಜ್ , ಕೆ ವಸಂತರಾಜ್ ಜೈನ್ , ನಿವೃತ್ತ ಶಿಕ್ಷಕರು , ಪ್ರೊ ಶಾಂತಿಪ್ರಕಾಶ್ ಕುಲಸಚಿವರು , ಪರೀಕ್ಷಾಂಗ ವಿಭಾಗ , ಎಸ್ ಡಿ ಎಮ್ ಕಾಲೇಜ್, ಶ್ರೀಮತಿ ಶಾಲಿನಿ , ನಿವೃತ್ತ ಶಿಕ್ಷಕಿ, ತಾಕೋಡೆ ಇವರಿಗೆ ಗುರುವಂದನೆ ಸಲ್ಲಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಗುರುವಂದನಾ ಭಾಷಣ ಮಾಡಿದರು.

Click here to View All