ಎಕ್ಸಲೆಂಟ್ ನ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರಿಗೆ ಕೃಷ್ಣೋತ್ಸವ ಪ್ರಶಸ್ತಿ ಪ್ರದಾನ.

ಮೂಡುಬಿದಿರೆ: ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೌದ್ರ ಫೌಂಡೇಶನ್ (ರಿ.) ವತಿಯಿಂದ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ಆಯೋಜಿಸಲಾಗಿದ್ದ 'ಬೆದ್ರದ ಕೃಷ್ಣೋತ್ಸವ-2026' ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ 2026ನೇ ಸಾಲಿನ ' ಕೃಷ್ಣೋತ್ಸವ ಪ್ರಶಸ್ತಿ'ಯನ್ನು ನೀಡಿ ಗೌರವಿಸಲಾಯಿತು.

Click here to View All