ಮೂಡಬಿದಿರೆ ಎಕ್ಸಲೆಂಟ್ ಸಂಸ್ಥೆಯಿಂದ ನಾಗರಿಕ ಜಾಗೃತಿ.

ಕಲ್ಲಬೆಟ್ಟಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯ ವತಿಯಿಂದ ಮೂಡುಬಿದಿರೆ ಪರಿಸರವನ್ನು ಸ್ವಚ್ಛವಾಗಿ ಇಡಲು ಮತ್ತು ರಸ್ತೆ ಸುರಕ್ಷತಾ ನಿಯಮ ಪಾಲಿಸಿ ಎಂಬ ನಾಗರಿಕ ಜಾಗೃತಿ ಜಾಥಾ ನಡೆಯಿತು. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಜಾಗೃತಿ ಜಾಥವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಮೂಲಕ ನಾಗರಿಕರನ್ನು ಸ್ವಚ್ಛತೆಯ ಕಡೆಗೆ ಹಾಗೂ ಏಕೆ ಬಳಕೆ ಪ್ಲಾಸ್ಟಿಕ್ ನಿಲ್ಲಿಸುವ ಬಗೆಗೆ ಜಾಗೃತೆ ಮೂಡಿಸಲು ಒಂದು ಚಿಕ್ಕ ಪ್ರಯತ್ನ ನಡೆಯುತ್ತಿದೆ ಅದಕ್ಕೆ ಎಲ್ಲರೂ ಸಹಕರಿಸಿ ಮೂಡುಬಿದಿರೆಯನ್ನು ಸ್ವಚ್ಛ, ಪ್ಲಾಸ್ಟಿಕ್ ಮುಕ್ತ ಮಾಡಲು ಕೈ ಜೋಡಿಸಬೇಕೆಂದು ಕೇಳಿಕೋಂಡರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ ಕನಿಷ್ಠ ಮಕ್ಕಳಿಂದಲಾದರೂ ಈ ಪ್ರಯತ್ನ ಯಶಸ್ವಿಗೊಂಡು ಸ್ವಚ್ಛ ಮೂಡುಬಿದಿರೆಯ ಕನಸು ಸಾಕಾರಗೊಳ್ಳಲಿ ಎಂದು ಹಾರೈಸಿದರು.

Click here to View All