ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯದರ್ಶಿ ರಶ್ಮಿತಾ ಜೈನ್‌ರಿಗೆ ಒಂಟಿಕಟ್ಟೆಯಲ್ಲಿ ಸನ್ಮಾನ.
ಮೂಡುಬಿದಿರೆ ಒಂಟಿಕಟ್ಟೆ ಸಾರ್ವಜನಿಕ ಗಣೇಶೋತ್ಸವದಲ್ಲಿ ಶಿಕ್ಷಣ ಕ್ಷೇತ್ರದ ಸಾಧಕ ಸಾವಿರಾರು ವಿದ್ಯಾರ್ಥಿಗಳಿಗೆ ಗುರುಕುಲ ಮಾದರಿಯ ಜ್ಞಾನಾರ್ಜನೆ ನೀಡಿ ಸಾಧನೆ ತೋರಿದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಸುವರ್ಣ, ಕಾರ್ಯದರ್ಶಿ ನಾಗೇಶ್, ಮಾಜಿ ಅಧ್ಯಕ್ಷ ನಾಗರಾಜ್ ಪೂಜಾರಿ ಮತ್ತಿತರ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.