ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಪ್ರಸ್ತಕ ವರ್ಷದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಕ್ಸಲೆಂಟ್ ನ ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಅಭಿನಂದಿಸಲಾಯಿತು. ಈ ಅಭಿನಂದನಾ ಸಮಾರಂಭದಲ್ಲಿ “ರಶ್ಮಿತಾಭಿನಂದನಂ” ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಡಿ. ಅನಿತಾ ಸುರೇಂದ್ರ ಕುಮಾರ್, ಕಾರ್ಕಳ ವರ್ಧಮಾನ ಎಜುಕೇಶನ್ ಸಂಸ್ಥೆಯ ಅಧ್ಯಕ್ಷೆ ಶಶಿಕಲಾ ಹೆಗ್ಡೆ , ಜಯಶ್ರೀ ಅಮರನಾಥ ಶೆಟ್ಟಿ ,ಮಾಜಿ ಸಚಿವ ಅಭಯಚಂದ್ರ ಜೈನ್, ಸಂಸ್ಥೆಯ ಆಡಳಿತ ನಿರ್ದೇಶಕ ಸಂಪತ್ ಕುಮಾರ್ , ಕಾಲೇಜಿನ ಪ್ರಿನ್ಸಿಪಾಲ್ ಪ್ರದೀಪ್ ಶೆಟ್ಟಿ, ಹೈಸ್ಕೂಲ್ ನ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಮತ್ತಿತರು ಉಪಸ್ಥಿತರಿದ್ದರು.

Click here to View All