ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ, ಕರ್ನಾಟಕ (Recognized Unaided private school’s Association of Karnataka) ರೂಪ್ಸಾ ಇವರು ಕೊಡಮಾಡುವ 2024-25 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ (ಆಡಳಿತಗಾರ) ಪ್ರಶಸ್ತಿ ಪಡೆದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರಿಗೆ ಪ್ರಾಂಶುಪಾಲರು, ಮುಖ್ಯೋಪಾದ್ಯಾಯರು, ಬೋಧಕ , ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಂದ ಹೃತ್ಪೂರ್ವಕ ಅಭಿನಂದನೆಗಳು.
ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಶ್ರೀಯುತರು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ , ಸಾಮಾಜಿಕ , ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ.