ಮೂಡಬಿದಿರೆಯ ಎಕ್ಸಲೆಂಟ್‌ನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನೀಸ್ ಪಂದ್ಯಾವಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಕಲ್ಲಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ೨೦೨೬-೨೭ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನೀಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಕಲ್ಲಬೆಟ್ಟುವಿನ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಸುಸಜ್ಜಿತ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಡುಬಿದಿರೆ ಕ್ಷೇತ್ರ ಶಿಕ್ಷಾಣಾಧಿಕಾರಿ ವಿರೂಪಾಕ್ಷ ಹೆಚ್ ಎನ್ ಅವರು, “ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಯ ಮತ್ತೊಂದು ಹೆಸರಾಗಿದೆ. ಶಿಕ್ಷಣ ಇಲಾಖೆಯ ಆಶಯಗಳಿಗೆ ಸದಾ ಸ್ಪಂದಿಸುತ್ತಾ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ ಅನೇಕ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕçತಿಕ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ತಿತವಾಗಿ ಆಯೋಜಿಸಿರುವ ಮೂಲಕ ಈ ಸಂಸ್ಥೆ ಜಿಲ್ಲೆಯಲ್ಲಿಯೇ ಮಾದರಿ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕ್ರೀಡಾ ಸೌಲಭ್ಯಗಳನ್ನು ಒದಗಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆಯನ್ನು ನಿರ್ಮಿಸಿರುವುದು ನಿಜಕ್ಕೂ ಅಭಿನಂದನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು, “ ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ಯಶಸ್ಸು ಸಾಧಿಸಲು ಶಿಸ್ತು, ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮ ಅತ್ಯಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ತಾಲೂಕು ಮಟ್ಟದಿಂದ ರಾಜ್ಯ, ರಾಷ್ಟ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಾಧನೆಯತ್ತ ಹೆಜ್ಜೆಯಿಡುವ ಗುರಿಯನ್ನು ಹೊಂದಬೇಕು. ನಿಮ್ಮ ಸಾಧನೆಯೇ ನಿಮ್ಮ ಕುಟುಂಬ, ಶಾಲೆ ಹಾಗೂ ಸಮಾಜದ ಹೆಮ್ಮೆಯಾಗಲಿ” ಎಂದು ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ,
ಮೂಡುಬಿದಿರೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್, ಗ್ರೇಡ್-೧
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಅಂಬೂರಿ, ಗ್ರೇಡ್-೨ ದೈಹಿಕ ಶಿಕ್ಷಣ
ಶಿಕ್ಷಕರ ಸಂಘದ ಅಧ್ಯಕ್ಷ ವಿನ್ನಿಫ್ರೆಡ್ ಪಿಂಟೋ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭ
ಕೋರಿದರು. Edit Delete